Isaiah 53:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Kannada BSI Bible 2016
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.
Kannada Bible (KNCL) BSI 2016
ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.