Isaiah 53:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
Kannada BSI Bible 2016
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
Kannada Bible (KNCL) BSI 2016
ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.