Isaiah 53:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Kannada BSI Bible 2016
ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Kannada Bible (KNCL) BSI 2016
ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.