Isaiah 53:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
Kannada BSI Bible 2016
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
Kannada Bible (KNCL) BSI 2016
ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.