Isaiah 53:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
Kannada BSI Bible 2016
ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
Kannada Bible (KNCL) BSI 2016
ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.