Isaiah 54:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
Kannada BSI Bible 2016
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
Kannada Bible (KNCL) BSI 2016
“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.