Isaiah 54:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.
Kannada BSI Bible 2016
ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರರತ್ನಗಳಿಂದ ನಿರ್ಮಿಸುವೆನು.
Kannada Bible (KNCL) BSI 2016
ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ಮತ್ತು ನಿನ್ನ ಮೇರೆಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡುವೆನು.