Isaiah 54:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
Kannada BSI Bible 2016
ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.
Kannada Bible (KNCL) BSI 2016
ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.