Isaiah 54:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
Kannada BSI Bible 2016
ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿವಿುತ್ತ ಕೆಡವಲ್ಪಡುವರು.
Kannada Bible (KNCL) BSI 2016
ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.