Isaiah 54:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
Kannada BSI Bible 2016
ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನುಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳು ಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
Kannada Bible (KNCL) BSI 2016
ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.