Isaiah 54:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
Kannada BSI Bible 2016
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.