Isaiah 54:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
Kannada BSI Bible 2016
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
Kannada Bible (KNCL) BSI 2016
ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು.