Isaiah 54:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು “ಇಡೀ ಭೂಲೋಕದ ದೇವರು” ಎಂದು ಕರೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
Kannada BSI Bible 2016
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
Kannada Bible (KNCL) BSI 2016
ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.