Isaiah 55:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,
Kannada BSI Bible 2016
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ
Kannada Bible (KNCL) BSI 2016
ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ