Isaiah 55:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
Kannada BSI Bible 2016
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.
Kannada Bible (KNCL) BSI 2016
ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.