Isaiah 55:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
Kannada BSI Bible 2016
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.
Kannada Bible (KNCL) BSI 2016
ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.