Isaiah 55:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
Kannada BSI Bible 2016
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
Kannada Bible (KNCL) BSI 2016
ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!