Isaiah 55:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
Kannada BSI Bible 2016
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
Kannada Bible (KNCL) BSI 2016
ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.