Isaiah 55:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
Kannada BSI Bible 2016
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.
Kannada Bible (KNCL) BSI 2016
ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.