Isaiah 55:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
Kannada BSI Bible 2016
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.
Kannada Bible (KNCL) BSI 2016
ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.