Isaiah 56:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
Kannada BSI Bible 2016
ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ: ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.