Isaiah 56:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
Kannada BSI Bible 2016
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
Kannada Bible (KNCL) BSI 2016
ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.