Isaiah 56:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
Kannada BSI Bible 2016
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
Kannada Bible (KNCL) BSI 2016
ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”