Isaiah 56:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು: ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
Kannada BSI Bible 2016
ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.
Kannada Bible (KNCL) BSI 2016
ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”