Isaiah 56:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
Kannada BSI Bible 2016
ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.
Kannada Bible (KNCL) BSI 2016
ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”