Isaiah 57:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
Kannada BSI Bible 2016
ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.
Kannada Bible (KNCL) BSI 2016
ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”