Isaiah 57:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
Kannada BSI Bible 2016
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ.
Kannada Bible (KNCL) BSI 2016
“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,