Isaiah 57:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವರಿಗೆ “ಸಮಾಧಾನ” ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
Kannada BSI Bible 2016
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.
Kannada Bible (KNCL) BSI 2016
ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.