Isaiah 57:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು. ನನ್ನ ದೇವರು ಹೇಳುವುದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
Kannada BSI Bible 2016
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.
Kannada Bible (KNCL) BSI 2016
“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.