Isaiah 57:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
Kannada BSI Bible 2016
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?
Kannada Bible (KNCL) BSI 2016
ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.