Isaiah 57:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.
Kannada BSI Bible 2016
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.
Kannada Bible (KNCL) BSI 2016
ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?