Isaiah 57:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
Kannada BSI Bible 2016
ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
Kannada BSI JV (ಕನ್ನಡ ಸತ್ಯವೇದವು J.V. (BSI))
[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?
Kannada Bible (KNCL) BSI 2016
ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?