Isaiah 58:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
Kannada BSI Bible 2016
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವದು.
Kannada Bible (KNCL) BSI 2016
ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.