Isaiah 58:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
Kannada BSI Bible 2016
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.