Isaiah 58:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
Kannada BSI Bible 2016
ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
Kannada Bible (KNCL) BSI 2016
“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.