Isaiah 58:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
Kannada BSI Bible 2016
ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
Kannada Bible (KNCL) BSI 2016
ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?