Isaiah 58:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
Kannada BSI Bible 2016
ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,
Kannada Bible (KNCL) BSI 2016
“ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?