Isaiah 59:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
Kannada BSI Bible 2016
ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.
Kannada Bible (KNCL) BSI 2016
ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.