Isaiah 59:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
Kannada BSI Bible 2016
ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
Kannada Bible (KNCL) BSI 2016
“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.