Isaiah 59:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
Kannada BSI Bible 2016
ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾವಿನಂತೆ [ಕೇಡಿನ] ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜಾಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣವಾಗುವದು, ಒಡೆದುಬಿಡುವವನಿಗೆ ವಿಷದ ಮರಿಹೊರಡುವದು.
Kannada Bible (KNCL) BSI 2016
ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತೀರಿ, ಜೇಡರ ಹುಳುವಿನಂತೆ ಬಲೆಯನ್ನು ನೇಯುತ್ತೀರಿ. ಆ ಮೊಟ್ಟೆಗಳನ್ನು ತಿನ್ನುವವನು ಸಾಯುತ್ತಾನೆ, ಅವನ್ನು ಹೊಡೆದುಬಿಡುವವನು ವಿಷದ ಮರಿಗಳು ಹೊರಬರುವಂತೆ ಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.