Isaiah 59:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
Kannada BSI Bible 2016
ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.
Kannada Bible (KNCL) BSI 2016
ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.