Isaiah 59:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
Kannada BSI Bible 2016
ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
Kannada Bible (KNCL) BSI 2016
ಆಗ ಜನರು ಹೀಗೆನ್ನುತ್ತಾರೆ: ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.