Isaiah 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
Kannada BSI Bible 2016
ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದಲ್ಲಿ ಹಾಳು ಹೆಚ್ಚಿ ಪಟ್ಟಣಗಳು ಜನರಿಲ್ಲದೆ ಮನೆಗಳು ನಿವಾಸಿಗಳಿಲ್ಲದೆ ಧ್ವಂಸವಾಗಿ ಭೂವಿುಯು ತೀರಾ ಹಾಳಾಗುವ ತನಕ ಹೀಗಿರುವದು.
Kannada Bible (KNCL) BSI 2016
“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.