Isaiah 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.
Kannada Bible (KNCL) BSI 2016
“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”