Isaiah 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
Kannada BSI Bible 2016
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.
Kannada Bible (KNCL) BSI 2016
ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.