Isaiah 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ “ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
Kannada BSI Bible 2016
ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.
Kannada Bible (KNCL) BSI 2016
ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.