Isaiah 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
Kannada BSI Bible 2016
ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.
Kannada Bible (KNCL) BSI 2016
ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.