Isaiah 60:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
Kannada BSI Bible 2016
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
Kannada Bible (KNCL) BSI 2016
ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.