Isaiah 60:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ.’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
Kannada BSI Bible 2016
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.
Kannada Bible (KNCL) BSI 2016
ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.