Isaiah 60:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
Kannada BSI Bible 2016
ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.
Kannada Bible (KNCL) BSI 2016
ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.